ಮುಂದಿರುವ ಬದುಕನ್ನ ನೆನೆಸಿಕೊಂಡರೇ ದಿಗಿಲುಗೊಳ್ಳುತ್ತೇನೆ.

4 ಆಕ್ಟೋ

ಕೊನೆಗೂ ದೇವರು ಅನ್ನುವ ನಾಜೂಕಯ್ಯ ನಿನ್ನ ವಿಷಯದಲ್ಲಿ ನನ್ನ ಪ್ರೀತಿ ತುಂಬಿದ ನಂಬಿಕೆಗಳನ್ನ ಹುಸಿಮಾಡಿಬಿಟ್ಟ . ನನ್ನ ಬದುಕಿನ ಪ್ರತಿ ದಿನದ ಪ್ರತಿ ಕ್ಷಣಗಳಲ್ಲಿ ಕೂಡ ನಾನು ನಿನ್ನ ಕುರಿತಾಗಿ ಒಂದೊಂದು ಕನಸು ಕಟ್ಟುತ್ತಿದ್ದೆ. ಆದರೇ ಅದಷ್ಟೂ ಕನಸುಗಳಿಗೆ ಮಣ್ಣಿನ ಹೊದಿಕೆಯ ಹೊದ್ದಿಸಿ ಮಲಗಿಸಿಬಿಟ್ಟೆ ನೀನು. ನಿನ್ನ ಮೇಲಿನ ಮೊದಲ ಪ್ರೀತಿಯಿಂದಾನೆ ಕೇಳ್ತಾ ಇದ್ದೀನಿ ಜಗತ್ತಿನಲ್ಲಿರುವ ಎಲ್ಲಾ ನೋವುಗಳೂ ನನಗೊಬ್ಬನಿಗೇ ಯಾಕೆ ? ಬದುಕಿನ ಕಡೆಯ ಕ್ಷಣಗಳವರೆಗೂ ಈ ನಿನ್ನ ಹುಡುಗ ನೋವಿನ ಅರಮನೆಯ ರಾಜಕುಮಾರನಾಗಿಯೇ ಇರಬೇಕಾ?

ಎದೆಯ ಎಲ್ಲ ತರಂಗಗಳಲ್ಲಿಯೂ ಬದುಕಿನ ಚಿತ್ತಾರ ಮೂಡಿಸಿದವಳು ನೀನು. ಅದೇ ತರಂಗಗಳಿಗೆ ವಿದಾಯದ ಕಹಿಯನ್ನೇಕೆ ತುಂಬಿದೆ ದೇವಕಿ? ಎದೆಯೊಳಗಿನ ಆಪ್ತ ಗೀತೆಯಂತಿದ್ದೆ ಅಲ್ಲವೇ ನೀನು, ಕೊನೆಗೂ ನನ್ನ ಪಾಲಿನ ಕಾಮನಬಿಲ್ಲಾಗಿಬಿಟ್ಟೆಯಲ್ಲ ನೀನಿರುವ ದೂರವೆಷ್ಟು ದೇವಕಿ? ನೀನು ಘೋರಿ ಕಟ್ಟಿದ ಪ್ರತಿ ಕನಸಿಗೂ ಗೂಡು ಕಟ್ಟೋದು ಬಲ್ಲೆ, ಅದು ನೀನೆ ನನಗೆ ಪ್ರೀತಿಯಿಂದ ಕಲಿಸಿದ ಪಾಠ. ಆದರೆ ನೀನಿಲ್ಲದೆ ನಾನು ಕಟ್ಟುವ ಗೂಡಿಗೆ ಹೆಚ್ಚಿನ ಆಯುಷ್ಯವಿಲ್ಲವೆಂದು ಮಾತ್ರ ಬಲ್ಲೆ ದೇವಕಿ.
ಬದುಕಿನ ಗೀತೆಯನ್ನ ನಿನ್ನ ಜೊತೆಯೇ ಹಾಡಬೇಕೆಂದು ಬೆಟ್ಟದಷ್ಟು ಕನಸ ಎದೆಯೊಳಗಿಟ್ಟುಕೊಂಡು ಕುಳಿತಿದ್ದ ಹುಡುಗ ನಾನು. ಗೀತೆಯ ಮೊದಲ ಸಾಲಿನಲ್ಲೇ ನಿನ್ನ ಜೊತೆಯಿಲ್ಲ..ಹಾಡುವುದಾದರೂ ಹೇಗೆ ದೇವಕಿ? ನಾನು ಹೋಗುವ ದಾರಿಯಲ್ಲಿ ನಿನ್ನ ಪುಟ್ಟ ಹೆಜ್ಜೆ ಜೊತೆಗಿರುತ್ತೆ ಅನ್ನುವ ನಂಬಿಕೆಯಲ್ಲಿ ಸಂತೋಷದಿಂದ ಹೆಜ್ಜೆ ಹಾಕುತ್ತಿದ್ದೆ..ಮೊದಲೆರೆಡು ಹೆಜ್ಜೆಯೇ ಮುಗಿದಿಲ್ಲ ಅದೆಲ್ಲಿಗೆ ನಿನ್ನ ಪಯಣ? ನನ್ನ ಹೆಜ್ಜೆಗಳೀಗ ಅನುಭವಿಸುತ್ತಿರುವ ತಬ್ಬಲಿತನಕ್ಕೆ ಹಾಡುವವರು ಯಾರು ?

ಈ ಬದುಕಿನಲ್ಲಿರುವ ಎಲ್ಲಾ ನೋವುಗಳ ತೂಕ ಒಂದಾದರೆ ಕಾರಣವೇ ಇಲ್ಲದೆ ಮುನಿದು ಹೋದ ನೀನು ಮತ್ತೆ ನಿನ್ನ ತಿರಸ್ಕಾರದ ತೂಕವೇ ಇನ್ನೊಂದು. ಇಲ್ಲಿ ಬರೆದಿದ್ದೆಲ್ಲ ನಿನ್ನ ಮೇಲಿನ ಕೋಪದಿಂದಾಗಲೀ ನೋವಿನಿಂದಾಗಲಿ ಅಲ್ಲ . ಕೆಲವೊಂದು ಸಲ ಮುಂದಿರುವ ಬದುಕನ್ನ ನೆನೆಸಿಕೊಂಡರೇ ದಿಗಿಲುಗೊಳ್ಳುತ್ತೇನೆ. ತುಂಬಾ ಮನುಷ್ಯನಿಗೆ ತುಂಬಾ ನೋವಾದಾಗ, ಕಷ್ಟಗಳು ಬಂದಾಗ, ಇನ್ನು ಬದುಕು ಸಾಧ್ಯವೇ ಇಲ್ಲ ಅನ್ನುವಾಗ ಯಾವ ದೇವರು ನೆನಪಾಗೋದಿಲ್ಲ. ಯಾವುದಾರೊಂದು ಹೆಗಲು ನೆನಪಾಗುತ್ತೆ, ಬೆಚ್ಚನೆಯ ಎದೆ ಬೇಕು ಅನ್ನಿಸುತ್ತೆ, ಕಣ್ಣೊರೆಸುವ ಒಂದು ಕೈಯ್ಯನ್ನ ಜೀವ ಬೇಡುತ್ತೆ. ತುಂಬಾ ನೋವಿನಲ್ಲಿದ್ದೀನಿ, ನೋವಾಗುತ್ತಿದೆ. ದೇವರಂತೂ ನನ್ನ ಬದುಕಿನಲ್ಲಿ ಮುನಿದು ಹೋಗಾಗಿದೆ ಮತ್ತು ದೇವರಂತಿದ್ದ ನೀನು. ಇಬ್ಬರೂ ಕಾರಣ ಹೇಳದೇ ಹೋಗಿದ್ದೀರಿ. ಕಾರಣವಿಲ್ಲದೆ ಬಂದುಬಿಡಿ,
ಅಂಗೈಯ್ಯಲ್ಲೆ ಬದುಕಿದೆ, ಜಾರಿ ಬೀಳುವ ಮುನ್ನ

ವಾಸು..:)

(ನನ್ನ ದೇವಕಿ ಬ್ಲಾಗ್ ಗೆ ಬರೆದ ಹಳೆ ಪತ್ರ )

4 Responses to “ಮುಂದಿರುವ ಬದುಕನ್ನ ನೆನೆಸಿಕೊಂಡರೇ ದಿಗಿಲುಗೊಳ್ಳುತ್ತೇನೆ.”

  1. amaresh.PG ಅಕ್ಟೋಬರ್ 4, 2012 at 11:43 ಫೂರ್ವಾಹ್ನ #

    baduku nenesikondare tumbane doddadu haganta baduko haseyanne kaledukondre hege
    baduku vidi barahada hage
    gottiddu matra ha devarigobbanige
    _________******amaresh.pg******_________

  2. nandu ಅಕ್ಟೋಬರ್ 9, 2012 at 10:12 ಫೂರ್ವಾಹ್ನ #

    badukina e payanadalli
    “navu ankolodakkinatha…ankollade iro gatenegale nadiyodu jaste….
    munde yen agutte annodu namage gotiilla…
    ad gottiro ha devaru maatadalla….
    yene adru “Hanebharahana” Badalisokkantu hagalla…. so yene kastagalu bandru jeevana emba ee payana nillalla..

  3. Niriksheya kannugalu............... ಅಕ್ಟೋಬರ್ 11, 2012 at 10:05 ಫೂರ್ವಾಹ್ನ #

    hey tumbane esta aythu somu………..:)
    ನೋವಿನ ಅರಮನೆಯ ರಾಜಕುಮಾರ,
    ಹೆಜ್ಜೆ ಅನುಭವಿಸುತ್ತಿರುವ ತಬ್ಬಲಿತನ,
    ಇಬ್ಬರೂ ಕಾರಣ ಹೇಳದೇ ಹೋಗಿದ್ದೀರಿ. ಕಾರಣವಿಲ್ಲದೆ ಬಂದುಬಿಡಿ,
    ಅಂಗೈಯ್ಯಲ್ಲೆ ಬದುಕಿದೆ, ಜಾರಿ ಬೀಳುವ ಮುನ್ನ…….
    ella lines channagidhe….

  4. Vani ಆಗಷ್ಟ್ 9, 2013 at 1:04 ಅಪರಾಹ್ನ #

    I like every word Anna

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: